ಅಂತಾರಾಷ್ಟ್ರೀಯ ಕುಸ್ತಿಯಲ್ಲಿ ಕುವೆಂಪು ವಿವಿ ಲೆಕ್ಚರರ್’ಗೆ ಗೋಲ್ಡ್ ಮೆಡಲ್

ಶಿವಮೊಗ್ಗ ಲೈವ್.ಕಾಂ | ಶಂಕರಘಟ್ಟ

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ, ಕುವೆಂಪು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಉಪನ್ಯಾಸಕರೊಬ್ಬರು, ಗೋಲ್ಡ್ ಮೆಡಲ್ ಗೆದ್ದಿದ್ದಾರೆ. ಏಳು ದೇಶಗಳ ಕುಸ್ತಿ ಪಟುಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.

ಕುವೆಂಪು ವಿವಿ ದೈಹಿಕ ಶಿಕ್ಷಣ ವಿಭಾಗದ ಉಪನ್ಯಾಸಕ ಸಂಜೀವ್ ಕುಮಾರ್, 74 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಯುನೆಸ್ಕೋ ಸಹಯೋಗದೊಂದಿಗೆ ನೇಪಾಳದ ಪೋಕಾರ ನಗರದಲ್ಲಿ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ನೇಪಾಳದ ರಾಕೇಶ್ ವರ್ಮಾ ಅವರೊಂದಿಗಿನ ಫೈನಲ್ ಪಂದ್ಯದಲ್ಲಿ, ಸಂಜೀವ್ ಕುಮಾರ್ ಗೆಲುವು ಸಾಧಿಸಿದ್ದಾರೆ.

ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಒಟ್ಟು ಏಳು ದೇಶದ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಇನ್ನು, ಚಿನ್ನದ ಪದಕ ಗೆದ್ದು ಬಂದ ಸಂಜೀವ್ ಕುಮಾರ್ ಅವರಿಗೆ, ಕುವೆಂಪು ವಿವಿ ಕುಲಪತಿ ಪ್ರೊ.ಜೋಗನ್ ಶಂಕರ್, ಕುಲಸಚಿವ ಭೋಜನಾಯ್ಕ, ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಎನ್.ಡಿ.ವಿರೂಪಾಕ್ಷ, ಡಾ.ಅಪ್ಪಣ್ಣ ಎಂ.ಗಸ್ತಿ ಅಭಿನಂದಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

Leave a Reply

error: Content is protected !!