ಮನೆ ಬಿಟ್ಟು ಹೊರಬರಲು ಗೋಪಾಳದ ನಿವಾಸಿಗಳಲ್ಲಿ ಭಯ.. ಭಯ.. ಯಾಕೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ

ನಗರದ ಪ್ರತಿಷ್ಠಿತ ಬಡಾವಣೆಗಳಾದ ಗೋಪಾಲಗೌಡ ಮತ್ತು ಸ್ವಾಮಿ ವಿವೇಕಾನಂದ ಬಡಾವಣೆಗಳಲ್ಲಿ ಇತ್ತೀಚೆಗೆ ಸರಗಳ್ಳತನ, ದರೋಡೆ, ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಇವುಗಳನ್ನು ನಿಯಂತ್ರಿಸಿ, ಕಳ್ಳರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಂತಾ ಬಡವಾಣೆಯ ನಿವಾಸಿಗಳು ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ ಅವರನ್ನು ಒತ್ತಾಯಿಸಿದ್ದಾರೆ.

ಎಸ್.ಪಿ.ಕಚೇರಿಗೆ ಆಗಮಿಸಿದ್ದ ಬಡಾವಣೆಯ ನಿವಾಸಿಗಳು, ಗೋಪಾಲಗೌಡ ಬಡಾವಣೆ ಮತ್ತು ವಿವೇಕಾನಂದ ಬಡಾವಣೆಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸುವಂತೆ ಒತ್ತಾಯಿಸಿದರು. ಇತ್ತೀಚೆಗೆ ಮೊಬೈಲ್ ಕಳ್ಳರ ಹಾವಳಿ ಹೆಚ್ಚಾಗಿದೆ. ಮನೆಗಳ್ಳತನಗಳಿಂದ ಆತಂಕ ಶುರುವಾಗಿದೆ. ಹಾಗಾಗಿ ಬಡಾವಣೆಯಲ್ಲಿ ಭಯದ ವಾತಾವರಣವಿದೆ ಎಂದು ಅಳಲು ತೋಡಿಕೊಂಡರು.

ಇನ್ನು, ಬಡಾವಣೆ ನಿವಾಸಿಗಳಿಗೆ ಸಮಸ್ಯೆ ಆಲಿಸಿದ ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ, ಗೋಪಾಳ ಮತ್ತು ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಗಸ್ತು ಹೆಚ್ಚಿಸಲಾಗುತ್ತದೆ. ಈವರೆಗೂ ದಾಖಲಾಗಿರುವ ಪ್ರಕರಣಗಳ ಕುರಿತು ಪರಿಶೀಲಿನೆ ನಡೆಸುವುದಾಗಿ ಭರವಸೆ ನೀಡಿದರು.

ಗೋಪಾಲಗೌಡ ಬಡಾವಣೆ ನಿವಾಸಿಗಳ ಸಂಘ, ಚಂದನ ಆರೋಗ್ಯ ಪಾರ್ಕ್, ಸ್ವಾಮಿ ವಿವೇಕಾನಂದ ಎ ಬ್ಲಾಕ್ ನಿವಾಸಿಗಳ ಸಂಘ, ಶಿವಮೊಗ್ಗ ಕ್ರಿಕೆಟ್ ಅಕಾಡೆಮಿ, ನಿರಂತರ ಟ್ರಸ್ಟ್, ಶರಧಿ ಮಹಿಳಾ ವೇದಿಕೆಯ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

Leave a Reply

error: Content is protected !!