ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದು ಹೂತವಳಿಗೆ ಶಿವಮೊಗ್ಗ ಕೋರ್ಟ್’ನಿಂದ ಶಿಕ್ಷೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 10 ಅಕ್ಟೋಬರ್ 2018

ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಹತ್ಯೆ ಮಾಡಿ, ಶವವನ್ನು ಹೂತು ಹಾಕಿದ್ದ ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. 2014ರಲ್ಲಿ ಘಟನೆ ನಡೆದಿತ್ತು.

ತೀರ್ಥಹಳ್ಳಿ ತಾಲೂಕಿನ ಯೋಗಿಮಳಲಿ ಗ್ರಾಮದ ಸುನಿತಾ, ಪ್ರಿಯಕರ ಮಂಜುನಾಥನ ಜೊತೆ ಸೇರಿ, ಪತಿ ಚಂದ್ರಶೇಖರ್’ನನ್ನು ಕೊಲೆ ಮಾಡಿದ್ದರು. ಬಳಿಕ ಮನೆ ಹಿಂಬಾಗದ ಜಮೀನಿನಲ್ಲಿ ಶವವನ್ನ ಹೂಳಲಾಗಿತ್ತು. ಈ ಕುರಿತು ಪ್ರಕರಣ ದಾಖಲಾಗಿತ್ತು. ಸಾಕ್ಷಿ ಸಹಿತವಾಗಿ ಆರೋಪ ಸಾಬೀತಾದ ಹಿನ್ನಲೆ, ಸುನಿತಾ ಮತ್ತು ಮಂಜುನಾಥ್’ಗೆ ಶಿಕ್ಷೆಯಾಗಿದೆ.

ವಿಚಾರಣೆ ನಡೆಸಿದ ಶಿವಮೊಗ್ಗದ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎ.ಹರೀಶ್ ಅವರು ತೀರ್ಪು ನೀಡಿದ್ದಾರೆ. ಮಂಜುನಾಥ್’ಗೆ ಒಂದ ಲಕ್ಷ ದಂಡ, ಸುನಿತಾಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ. ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಕ್ಕೆ ಏಳು ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ. ಅಪರಾಧಕ್ಕೆ ಸುನಿತಾಗೆ 2 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ದಂಡ ವಿಧಿಸಲಾಗಿದೆ. ಇನ್ನು, ಮೃತನ ಮಕ್ಕಳಿಗೆ ಒಂದು ಲಕ್ಷ ರೂ. ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ.

ಪ್ರಕರಣ ಸಂಬಂಧ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಜೆ.ಶಾಂತರಾಜ್ ವಾದ ಮಂಡಿಸಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!