ಶಿವಮೊಗ್ಗ ಸಿಟಿಯಲ್ಲಿ ರೌಡಿ ಶೀಟರ್’ಗಳ ಚಳಿ ಬಿಡಿಸಿದ ಪೊಲೀಸ್, ಲಾಂಗು, ಮಚ್ಚುಗಳು ಸೀಜ್

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 09 ಸೆಪ್ಟೆಂಬರ್ 2018

ನಗರದಾದ್ಯಂತ ಇರುವ ರೌಡಿಗಳಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ದಿಢೀರ್ ದಾಳಿ ನಡೆಸಿ ಲಾಂಗು, ಮಚ್ಚುಗಳನ್ನು ವಶಕ್ಕೆ ಪಡೆದಿದ್ದಾರೆ. ಅಷ್ಟೇ ಅಲ್ಲಾ, ರೌಡಿ ಚಟುವಟಿಕೆಯಲ್ಲಿ ತೊಡಗದಂತೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಗಣಪತಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆ, ಪೊಲೀಸರು, ರೌಡಿಗಳ ಪರೇಡ್ ಮಾಡಿದ್ದಾರೆ. ಸಿಟಿಯಲ್ಲಿ ಶಾಂತಿಗೆ ಭಂಗ ತರದಂತೆ ಎಚ್ಚರಿಕೆ ನೀಡಿದ್ದಾರೆ.

ಲಾಂಗು, ಮಚ್ಚುಗಳು ವಶಕ್ಕೆ

ನಗರದಾದ್ಯಂತ ಸುಮಾರು 300ಕ್ಕೂ ಹೆಚ್ಚು ರೌಡಿಗಳ ಪರೇಡ್ ಮಾಡಲಾಗಿದೆ. 100ಕ್ಕೂ ಹೆಚ್ಚು ಜನರ ಬಳಿ ಬಾಂಡ್ ಬರೆಸಿಕೊಳ್ಳಲಾಗಿದೆ.

ಇನ್ನು, ಪರೇಡ್’ಗೆ ಬಾರದೆ ತಪ್ಪಿಸಿಕೊಂಡಿದ್ದ ಮತ್ತು ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದ ಮೇಲೆ, 29 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಕೆಲವರ ಬಂಧನದ ಸಂದರ್ಭ ಲಾಂಗು, ಮಚ್ಚುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ನಗರದಲ್ಲಿ 1200ಕ್ಕೂ ಹೆಚ್ಚು ರೌಡಿ ಶೀಟರ್’ಗಳಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 741170200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!