BREAKING NEWS | ಕ್ಷುಲಕ ವಿಚಾರಕ್ಕೆ ಕಿರಿಕ್, ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 11 ಅಕ್ಟೋಬರ್ 2018

ಕ್ಷುಲಕ ಕಾರಣಕ್ಕೆ ಸೋಮಿನಕೊಪ್ಪದಲ್ಲಿ ಯುವಕನೊಬ್ಬನಿಗೆ ಚಾಕು ಇರಿಯಲಾಗಿದೆ. ಗಾಂಭೀರ ಗಾಯಗೊಂಡಿರುವ ಯುವಕನನ್ನು ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇರ್ಫಾನ್ ಚಾಕು ಇರಿತಕ್ಕೆ ಒಳಗಾದವನು. ಸಂಬಂಧಿಯೊಬ್ಬರ ಜೊತೆ ಕ್ಷುಲಕ ಕಾರಣಕ್ಕೆ ಶುರುವಾದ ಜಗಳದಲ್ಲಿ ಇರ್ಫಾನ್’ಗೆ ಚಾಕು ಇರಿಯಲಾಗಿದೆ. ಚಾಕು ಇರಿದ ವ್ಯಕ್ತಿಯ ಹೆಸರು ಕೂಡ ಇರ್ಫಾನ್. ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಇಬ್ಬರ ನಡುವೆ, ಹಣಕಾಸಿನ ವಿಚಾರದಲ್ಲಿ ಜಗಳವಾಗಿದೆ.

ಗಲಾಟೆ ವಿಕೋಪಕ್ಕೆ ತಿರುಗಿ ಚಾಕು ಇರಿಯಲಾಗಿದೆ. ಇರ್ಫಾನ್’ಗೆ ಚಿಕಿತ್ಸೆ ನಡೆಯುತ್ತಿದೆ. ವಿನೋಬನಗರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!