ನಟ ಪ್ರಕಾಶ್ ರಾಜ್ ವಿರುದ್ಧ ಶಿವಮೊಗ್ಗದಲ್ಲಿ ಕಪ್ಪು ಬಾವುಟ ಪ್ರದರ್ಶನ

ಲೈವ್ ಕರ್ನಾಟಕ.ಕಾಂ | ಶಿವಮೊಗ್ಗ

ನಟ ಪ್ರಕಾಶ್ ರಾಜ್ ಮತ್ತು ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಕಪ್ಪು ಬಾವುಟ ತೋರಿಸಿದ ಬಿಜೆಪಿ ಕಾರ್ಯಕರ್ತರನ್ನು ಶಿವಮೊಗ್ಗದಲ್ಲಿ ಅರೆಸ್ಟ್ ಮಾಡಲಾಗಿದೆ. ಶಿವಪ್ಪ ನಾಯಕ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ನಟ ಪ್ರಕಾಶ್ ಅವರೊಂದಿಗೆ ಸಂವಿಧಾನ ಕುರಿತು ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.

ಶಿವಮೊಗ್ಗದ ಎನ್.ಡಿ.ವಿ ಹಾಸ್ಟೆಲ್ ಆವರಣದಲ್ಲಿ ಸಂವಿಧಾನ ಉಳಿವಿಗಾಗಿ ಕರ್ನಾಟಕ ವೇದಿಕೆ ಸಂಕಲ್ಪ ಸಮಾವೇಶ ಆಯೋಜಿಸಿದೆ. ನಟ ಪ್ರಕಾಶ್ ರಾಜ್, ಶಾಸಕ ಜಿಗ್ನೇಶ್ ಮೇವಾನಿ ಪಾಲ್ಗೊಂಡಿದ್ದಾರೆ. ಅವರ ವಿರುದ್ಧ ಕಪ್ಪು ಬಾವುಟ ತೋರಿಸಿದ ಬಿಜೆಪಿ ಕಾರ್ಯಕರ್ತರು, ಸಂವಿಧಾನ ಕುರಿತು ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು, ಸಮಾವೇಶದ ಆವರಣದೊಳಗೆ ನುಗ್ಗಲು ಯತ್ನಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚನ್ನಬಸಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನ ನಡೆಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಲೈವ್ ಕರ್ನಾಟಕ.ಕಾಂ ವಾಟ್ಸಪ್ ನಂಬರ್ | 7411700200

Leave a Reply

error: Content is protected !!