ಎರಡೇ ವರ್ಷದಲ್ಲಿ ಸಿಗಂದೂರು ಸೇತುವೆ ಕಂಪ್ಲೀಟ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ

ಲೈವ್ ಕರ್ನಾಟಕ.ಕಾಂ | ಶಿವಮೊಗ್ಗ

ಬಹು ವರ್ಷದ ಬೇಡಿಕೆಯಾಗಿದ್ದ, ಸಿಗಂದೂರು ಸೇತುವೆ ಮತ್ತು ಶಿವಮೊಗ್ಗ – ತುಮಕೂರು ನಡುವೆ ನಾಲ್ಕು ಲೇನ್ ರಸ್ತೆ ನಿರ್ಮಾಣ ಕಾಮಗಾರಿಗೆ, ಕೇಂದ್ರ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದರು.

ಸಾಗರದ ಹೊಳೆಬಾಗಿಲು ಕಳಸವಳ್ಳಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಟನ್ ಒತ್ತುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಈ ವೇಳೆ, ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ನಾಡಿಗೆ ಬೆಳಕು ನೀಡಲು ಹೋಗಿ ಸಂತ್ರಸ್ತರಾದವರಿಗೆ ಸಂಪರ್ಕ ವ್ಯವಸ್ಥೆ ಕಲ್ಪಿಸುವ ಮಹತ್ವದ ಕಾರ್ಯವಿದು. ಸಂಸದ ಯಡಿಯೂರಪ್ಪ ಅವರು ಬಹಳ ಸರಿ ತಮ್ಮ ಬಳಿ ಬಂದು ಸೇತುವೆ ನಿರ್ಮಿಸಿಕೊಡುವಂತೆ ಮನವಿ ಮಾಡಿದರು ಎಂದು ಹೇಳಿದರು.

ಇದನ್ನೂ ಓದಿ | ಸಿಗಂದೂರು ಸೇತುವೆಗೆ ಶಂಕುಸ್ಥಾಪನೆ, ಹೇಗಿರುತ್ತೆ ಸೇತುವೆ? ಅದರ ವಿಶೇಷತೆಗಳೇನು ಗೊತ್ತಾ?

ಎರಡು ವರ್ಷದಲ್ಲೇ ಮುಗಿಸುತ್ತೇವೆ

ಇನ್ನು, ಸೇತುವೆ ಕಾಮಗಾರಿಯನ್ನು ಎರಡು ವರ್ಷದಲ್ಲಿ ಮುಗಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಸೇತುವೆಯಿಂದ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಅನುಕೂಲ ಆಗಲಿದೆ ಎಂದರು.

ಸಂಸದ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ, ಶಾಸಕ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಂಕುಸ್ಥಾಪನೆಯ ಮತ್ತು ಸಿಗಂದೂರು ಲಾಂಚ್‍ ವಿಡಿಯೋ

ಸಿಗಂದೂರು ಸೇತುವೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಶಂಕುಸ್ಥಾಪನೆ

ಸಿಗಂದೂರು ಸೇತುವೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಶಂಕುಸ್ಥಾಪನೆ, ಸಮಾರಂಭದ ವಿಡಿಯೋ, ಲಾಂಚ್‍ನ ಸಂಭ್ರಮ

Posted by Live Karnataka Shivamogga on Monday, 19 February 2018

ಲೈವ್ ಕರ್ನಾಟಕ ವಾಟ್ಸಪ್ | 7411700200

(ವಾಟ್ಸಪ್ ಮಾಡಿ, ಶಿವಮೊಗ್ಗದ ನ್ಯೂಸ್ ಪಡೆಯಿರಿ. ನಾವು ವಾಟ್ಸಪ್ ಗ್ರೂಪ್ ಮಾಡುವುದಿಲ್ಲ. ನಿಮಗೆ ಪ್ರತ್ಯೆಕವಾಗಿ ನ್ಯೂಸ್ ಕಳುಹಿಸುತ್ತೇವೆ. ಇನ್ನು, ನಿಮ್ಮೂರಿನ ಕಾರ್ಯಕ್ರಮಗಳು, ಸಭೆ, ಸಮಾರಂಭಗಳು, ನ್ಯೂಸ್ ಆಗುವಂತಹ ಘಟನೆಗಳಿದ್ದರೆ, ಕೂಡಲೇ ನಮಗೆ ವಾಟ್ಸಪ್ ಮಾಡಿ. ಸುಳ್ ಸುದ್ದಿಗಳನ್ನು ಕಳುಹಿಸಬೇಡಿ, ನಾವು ಅಂತಹ ಸುದ್ದಿ ಪ್ರಕಟಿಸುವುದಿಲ್ಲ)

Leave a Reply

error: Content is protected !!