50 WORDS NEWS | ಶಸ್ತ್ರಾಸ್ತ್ರ ಠೇವಣಿಗೆ ಡಿ.ಸಿ ಸೂಚನೆ, ತೀರ್ಥಹಳ್ಳಿಯಲ್ಲಿ ಗ್ರಾ. ಪಂ. ಉಪಾಧ್ಯಕ್ಷ ಪದಚ್ಯುತಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 11 ಅಕ್ಟೋಬರ್ 2018

ಎಲೆಕ್ಷನ್ ಹಿನ್ನೆಲೆ, ಶಸ್ತ್ರಾಸ್ತ್ರ ಠೇವಣಿಗೆ ಸೂಚನೆ

ಲೋಕಸಭೆ ಉಪ ಚುನಾವಣೆ ಹಿನ್ನೆಲೆ, ಶಸ್ತ್ರಾಸ್ತ್ರ ಮತ್ತು ಆಯುಧಗಳನ್ನು ಹೊಂದಿರುವವರು, ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಸಮೀಪದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು ಅಂತಾ ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದ್ದಾರೆ. ಠಾಣೆಗಳಲ್ಲಿ ಆಯುಧಗಳನ್ನು ಸುರಕ್ಷಿತವಾಗಿ ಠೇವಣಿ ಇಟ್ಟುಕೊಳ್ಳುವುದರ ಜೊತೆಗೆ ಪರವಾನಗಿದಾರರಿಗೆ ಸೂಕ್ತ ರಸೀದಿ ನೀಡುವಂತೆ ಸೂಚಿಸಿದ್ದಾರೆ.

ದೂರು ಸ್ವೀಕಾರ ಕೇಂದ್ರ ಆರಂಭ

ಲೋಕಸಭೆ ಉಪಚುನಾಣೆ ಹಿನ್ನೆಲೆ, ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮತ್ತು ಚುನಾವಣೆಗೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲು ಶಿವಮೊಗ್ಗ ತಾಲೂಕು ಕಚೇರಿಯಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಇದರ ದೂರವಾಣಿ ಸಂಖ್ಯೆ 08182 279311, ಟೋಲ್ ಫ್ರೀ ಸಂಖ್ಯೆ 1077ಗೆ ಕರೆ ಮಾಡಿ ಈ ಭಾಗಕ್ಕೆ ಸಂಬಂಧಿಸಿದ ದೂರುಗಳನ್ನು ನೀಡಬಹುದು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪದಚ್ಯುತಿ

ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಂದರೇಶ್ ಅವರನ್ನು ಅವಿಶ್ವಾಸ ನಿರ್ಣಯದ ಮೂಲಕ ಪದಚ್ಯುತಗೊಳಿಸಲಾಗಿದೆ. ವಿಶ್ವಾಸಮತದ ವೇಳೆ ಗ್ರಾಮ ಪಂಚಾಯಿತಿಯ ಎಲ್ಲಾ 10 ಸದಸ್ಯರು ಉಪಸ್ಥಿತರಿದ್ದರು. ಈ ವೇಳೆ ಅವಿಶ್ವಾಸದ ಪರವಾಗಿ 9 ಮತ ಮತ್ತು ವಿರುದ್ಧವಾಗಿ 1 ಮತ ಚಲಾವಣೆಯಾಗಿತ್ತು. ಗ್ರಾಮ ಪಂಚಾಯಿತಿ ಕಾರ್ಯದಲ್ಲಿ ಸಕಾರಾತ್ಮಕವಾಗಿ ಸಹಕಾರ ನೀಡುತ್ತಿಲ್ಲ ಎಂಬ ಆರೋಪದ ಹಿನ್ನೆಲೆ, ಅವಿಶ್ವಾಸ ಮಂಡಿಸಲಾಗಿತ್ತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!