ಶಿವಮೊಗ್ಗದ ಹೊಟೇಲ್’ನಲ್ಲಿ ಕಾಂಗ್ರೆಸ್ ನಾಯಕರ ಸೀಕ್ರೆಟ್ ಮೀಟಿಂಗ್, ಯಾರೆಲ್ಲ ಇದ್ದರು? ಏನೆಲ್ಲ ಚರ್ಚೆಯಾಗಿದೆ?

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 08 ಅಕ್ಟೋಬರ್ 2018

ಲೋಕಸಭೆ ಉಪ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚಿಸಲು, ಕಾಂಗ್ರೆಸ್ ಮುಖಂಡರು ಶಿವಮೊಗ್ಗದ ಖಾಸಗಿ ಹೊಟೇಲ್’ನಲ್ಲಿ ಸಭೆ ನಡೆಸಿದ್ದಾರೆ. ಪ್ರಮುಖರಷ್ಟೇ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಮಾಜಿ ಸಚಿವ ಕಿಮ್ಮನೆ ರತ್ನಾಕರ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್, ಮಾಜಿ ಶಾಸಕ ಪ್ರಸನ್ನಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರ್ ಸೇರಿದಂತೆ ಕೆಲವರಷ್ಟೇ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ನಾಳೆ ಬೆಂಗಳೂರಿನಲ್ಲಿ ಮಹತ್ವದ ಮೀಟಿಂಗ್

ಇನ್ನು, ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ನಾಳೆ ಬೆಂಗಳೂರಿಲ್ಲಿ ಮಹತ್ವದ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಜಿಲ್ಲಾ ಕಮಿಟಿಯ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಶಿವಮೊಗ್ಗದಲ್ಲಿ ಸಭೆ ನಡೆಸಲಾಗಿದೆ.

ಯಾರಾಗಬಹುದು ಕ್ಯಾಂಡಿಡೇಟ್?

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಯಾರನ್ನು ಕಣಕ್ಕಿಳಿಸಬೇಕು ಅನ್ನುವ ಕುರಿತು ಚರ್ಚೆಯಾಗಿದೆ. ಈಗಾಗಲೇ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಚಾಲ್ತಿಯಲ್ಲಿದೆ. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

 

Leave a Reply

error: Content is protected !!