ಶಿವಮೊಗ್ಗ ಉಪ ಚುನಾವಣೆ, ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ಮತ್ತೊರ್ವ ಮಾಜಿ ಸಚಿವ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 10 ಅಕ್ಟೋಬರ್ 2018

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಲೋಕಸಭೆ ಉಪ ಚುನಾವಣೆಯ ಟಿಕೆಟ್ ನಿರಾಕರಿಸಿದ ಬೆನ್ನಲ್ಲೆ ಮತ್ತೋರ್ವ ಮಾಜಿ ಸಚಿವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗದ ಉಪ ಚುನಾವಣೆ ತಡೆಗೆ ರಾಷ್ಟ್ರಪತಿ, ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಟಿಕೆಟ್ ನಿರಾಕರಿಸಿದ್ದಾರೆ ಅಂತಾ ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಈ ವಿಚಾರ ತಿಳಿಸಿರುವ ಕಿಮ್ಮನೆ ರತ್ನಾಕರ್ ಅವರು, ಹಣದ ಪ್ರಭಾವದ ಎದುರು ನನ್ನಂಥವರು ಚುನಾವಣೆ ಎದುರಿಸೋದು ಕಷ್ಟ. ಒಂದು ವೇಳೆ, ಹೈಕಮಾಂಡ್ ನಿರ್ಧರಿಸಿದ ಟಿಕೆಟ್ ನೀಡಿದರೆ, ಸ್ಪರ್ಧಿಸುತ್ತೇನೆ ಅಂತಾ ತಿಳಿಸಿದ್ದಾರಂತೆ.

ಇಬ್ಬರು ಪ್ರಭಾವಿ ನಾಯಕರು ಟಿಕೆಟ್ ನಿರಾಕರಿಸಿರುವುದರಿಂದ ಅಭ್ಯರ್ಥಿಗಳ ಆಯ್ಕೆ ಮತ್ತಷ್ಟು ಕಗ್ಗಂಟಾಗಿದೆ.  

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!