ಮಧು ಬಂಗಾರಪ್ಪ ವಿರುದ್ಧ ಕುಮಾರ್ ಬಂಗಾರಪ್ಪ ಗರಂ, ಐದು ವರ್ಷದಲ್ಲಿ ಕ್ಷೇತ್ರಕ್ಕೆ ತುಂಬಾ ನಷ್ಟ ಅಂತಾ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 24 ಸೆಪ್ಟೆಂಬರ್ 2018

ಮಾಜಿ ಶಾಸಕ ಮಧು ಬಂಗಾರಪ್ಪ ವಿರುದ್ಧ ಸೊರಬ ಶಾಸಕ ಕುಮಾರ್ ಬಂಗಾರಪ್ಪ ಆಕ್ರೋಶ ಹೊರಹಾಕಿದ್ದಾರೆ. ಐದು ವರ್ಷದಲ್ಲಿ ಸೊರಬ ಕ್ಷೇತ್ರಕ್ಕೆ ತುಂಬಲಾರದಷ್ಟು ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಕುಮಾರ್ ಬಂಗಾರಪ್ಪ, ಬಗರ್ ಹುಕುಂ ಹಕ್ಕುಪತ್ರ ವಿತರಣೆಯಲ್ಲಿ ಭಾರೀ ಭ್ರಷ್ಟಾಚಾರ ಆಗಿದೆ. ಹಕ್ಕು ಪತ್ರಕ್ಕಾಗಿ ರೈತರು ತಮ್ಮ ಎತ್ತುಗಳನ್ನು ಮಾರಾಟ ಮಾಡಿದ್ದಾರೆ. ಇದನ್ನು ಸಾಕ್ಷಿ ಸಹಿತವಾಗಿ ಸಾಬೀತು ಮಾಡುತ್ತೇನೆ ಅಂತಾ ಸವಾಲು ಹಾಕಿದರು.

ಚುನಾವಣೆ ಬಳಿಕ ಜೆಡಿಎಸ್ ನಾಪತ್ತೆ

ಸೊರಬ ಕ್ಷೇತ್ರದಲ್ಲಿ ಚುನಾವಣೆ ಬಳಿಕ ಜೆಡಿಎಸ್ ಪಕ್ಷದವರು ನಾಪತ್ತೆಯಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಷ್ಟೇ ಅವರು ಕಾಣಿಸಿಕೊಳ್ಳುತ್ತಿದ್ದಾರೆ ಅಂತಾ ಪರೋಕ್ಷವಾಗಿ ಮಧು ಬಂಗಾರಪ್ಪ ವಿರುದ್ಧ ಟಾಂಗ್ ನೀಡಿದರು.

ಶೀಘ್ರದಲ್ಲೇ ಬಿಜೆಪಿ ಸರ್ಕಾರ

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಹಾಸನದಲ್ಲಿ ಅಲ್ಲಿ, ಇಲ್ಲಿ ಸಭೆ ಮಾಡಿಕೊಂಡು ಪರದಾಡುತ್ತಿದ್ದಾರೆ. ಇದನ್ನೆಲ್ಲ ಗಮನಿಸಿದರೆ, ರಾಜ್ಯದಲ್ಲಿ ಶೀಘ್ರದಲ್ಲೇ ಬಿಜೆಪಿ ಸರ್ಕಾರ ರಚನೆಯಾಗಲಿದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!