ನಾಮಪತ್ರ ಸಲ್ಲಿಸಿದ ಮಧು ಬಂಗಾರಪ್ಪ, ಸಿಎಂ, ಮಾಜಿ ಮಿನಿಸ್ಟರ್’ಗಳು ಸಾಥ್

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 16 ಅಕ್ಟೋಬರ್ 2018

ಜೆಡಿಎಸ್ – ಕಾಂಗ್ರೆಸ್ ಒಮ್ಮತದ ಅಭ್ಯರ್ಥಿ ಮಧು ಬಂಗಾರಪ್ಪ ಇವತ್ತು ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಶಾಸಕ ಸಂಗಮೇಶ್ವರ್ ಅವರೊಂದಿಗೆ ತೆರಳಿ ಮಧು ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮೊದಲು ರವೀಂದ್ರ ನಗರ ಗಣಪತಿ ದೇವಸ್ಥಾನದಲ್ಲಿ ಮಧು ಬಂಗಾರಪ್ಪ ವಿಶೇಷ ಪೂಜೆ ಸಲ್ಲಿಸಿದರು. ರವೀಂದ್ರನಗರ ಗಣಪತಿ ದೇವಸ್ಥಾನದಿಂದ ನೆಹರೂ ಮೈದಾನದವರೆಗೆ ಮೆರವಣಿಗೆ ನಡೆಸಲಾಯಿತು. ಜೆಡಿಎಸ್, ಕಾಂಗ್ರೆಸ್ ಪಕ್ಷದ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!