ತರಾತುರಿಯಲ್ಲಿ ನಾಮಪತ್ರ ಸಲ್ಲಿಸೋಕೆ ಮಧು ನಿರಾಕರಣೆ, ನಾಳೆ ಶಕ್ತಿಪ್ರದರ್ಶನ, ಶಿವಮೊಗ್ಗಕ್ಕೆ ಸಿಎಂ, ಕೆಪಿಸಿಸಿ ಅಧ್ಯಕ್ಷ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ  | 15 ಅಕ್ಟೋಬರ್ 2018

ತರಾತುರಿಯಲ್ಲಿ ನಾಮಪತ್ರ ಸಲ್ಲಿಸುವುದಕ್ಕೆ ಮಧು ಬಂಗಾರಪ್ಪ ನಿರಾಕರಿಸಿದ್ದಾರೆ. ಈ ಹಿನ್ನೆಲೆ, ಜೆಡಿಎಸ್ – ಕಾಂಗ್ರೆಸ್ ಒಮ್ಮತದ ಅಭ್ಯರ್ಥಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ನಾಳೆ ನಗರದಲ್ಲಿ ಜೆಡಿಎಸ್ – ಕಾಂಗ್ರೆಸ್ ಪಕ್ಷಗಳು ಶಕ್ತಿ ಪ್ರದರ್ಶನ ಮಾಡಲಿವೆ.

ಸಾಲು ಸಾಲು ಮೀಟಿಂಗ್’ಗಳು

ವಿದೇಶ ಪ್ರವಾಸಕ್ಕೆ ತೆರಳಿದ್ದ ಮಧು ಬಂಗಾರಪ್ಪ ಬೆಂಗಳೂರಿಗೆ ಮರಳಿದ್ದಾರೆ. ಇವತ್ತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡರನ್ನು ಭೇಟಿ ಆಗಲಿದ್ದಾರೆ. ಎಲ್ಲರೊಂದಿಗೂ ಮೀಟಿಂಗ್ ಮಾಡಲಿದ್ದಾರೆ.

ಶಕ್ತಿ ಪ್ರದರ್ಶನಕ್ಕೆ ಗಣ್ಯಾತಿಗಣ್ಯರು

ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ – ಕಾಂಗ್ರೆಸ್ ಪಕ್ಷಗಳು ಶಕ್ತಿ ಪ್ರದರ್ಶನ ಮಾಡಲಿವೆ. ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್ ಪ್ರಮುಖರಾದ ಆರ್.ವಿ.ದೇಶಪಾಂಡೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿರಲಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!