50 WORDS NEWS | ಭಾನುಪ್ರಕಾಶ್ ಮತ್ತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ | ಶಿವಮೊಗ್ಗಕ್ಕೆ ಇವತ್ತು ಸಿಎಂ ಕುಮಾರಸ್ವಾಮಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 16 ಅಕ್ಟೋಬರ್ 2018

ಭಾನುಪ್ರಕಾಶ್ ಮತ್ತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ

ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಅವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ಮರು ನೇಮಕ ಮಾಡಿ, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇಮಕ ಮಾಡಿದ್ದಾರೆ. ಲೋಕಸಭೆ ಉಪ ಚುನಾವಣೆ ಸಂದರ್ಭ ನೇಮಕ ಮಾಡಿರುವುದು ಮಹತ್ವ ಪಡೆದಿದೆ. ಭಾನು ಪ್ರಕಾಶ್ ಅವರು ಈ ಹಿಂದೆ ರಾಜ್ಯ ಉಪಾಧ್ಯಕ್ಷ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಕೆ.ಎಸ್.ಈಶ್ವರಪ್ಪ ಮತ್ತು ರಾಯಣ್ಣ ಬ್ರಿಗೇಡ್ ಪರವಾಗಿ ಹೇಳಿಕೆ ನೀಡಿದ್ದರಿಂದ ಯಡಿಯೂರಪ್ಪ ಅವರು ಭಾನುಪ್ರಕಾಶ್ ಅವರನ್ನು ಉಪಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದರು.

ಶಿವಮೊಗ್ಗಕ್ಕೆ ಸಿಎಂ ಕುಮಾರಸ್ವಾಮಿ

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಗ್ಗೆ 10.45ರ ಹೊತ್ತಿಗೆ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸುವ ಅವರು, ಲೋಕಸಭೆ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಸುವ ಸಂದರ್ಭ ಜೊತೆಗಿರಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣಕ್ಕೆ ತೆರಳಲಿದ್ದಾರೆ ಅಂತಾ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಬಸವೇಶ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!