ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ, ಉಪ ಚುನಾವಣಾ ಕಣದಲ್ಲಿ ಯಾರೆಲ್ಲ ಇದ್ದಾರೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 16 ಅಕ್ಟೋಬರ್ 2018

ಲೋಕಸಭೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಚುನಾವಣಾ ಆಯೋಗ ನೀಡಿದ್ದ ಅವಧಿ ಮುಕ್ತಾಯವಾಗಿದೆ. ನಾಲ್ವರು ಅಭ್ಯರ್ಥಿಗಳು ಕಣದಲ್ಲಿದ್ದು, ಹನ್ನೊಂದು ನಾಮಪತ್ರ ಸಲ್ಲಿಕೆಯಾಗಿದೆ.

ಬಿಜೆಪಿಯಿಂದ ಬಿ.ವೈ.ರಾಘವೇಂದ್ರ, ಜೆಡಿಎಸ್ – ಕಾಂಗ್ರೆಸ್ ಪಕ್ಷದ ಒಮ್ಮತದ ಅಭ್ಯರ್ಥಿ ಮಧು ಬಂಗಾರಪ್ಪ, ಜೆಡಿಯು ಅಭ್ಯರ್ಥಿ ಮಹಿಮಾ ಪಟೇಲ್,  ಸ್ವತಂತ್ರ ಅಭ್ಯರ್ಥಿ ಶಶಿಕುಮಾರ್ ಬಿ.ಕೆ ನಾಮಪತ್ರ ಸಲ್ಲಿಸಿದ್ದಾರೆ.

ಕೆಲವು ಅಭ್ಯರ್ಥಿಗಳು ಒಂದಕ್ಕಿಂತಲೂ ಹೆಚ್ಚು ನಾಮಪತ್ರ ಸಲ್ಲಿಸಿದ್ದಾರೆ. ಹಾಗಾಗಿ ಹನ್ನೊಂದು ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಳೆ ಪರಿಶೀಲನೆ ನಡೆಯಲಿದ್ದು, ಅ.20ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!