‘ಕಾಂಗ್ರೆಸ್, ಜೆಡಿಎಸ್ ಯಾರನ್ನೇ ಕಣಕ್ಕಿಳಿಸಿದರೂ ಶಿವಮೊಗ್ಗದಲ್ಲಿ ಗೆಲುವು ನಮ್ಮದೆ’

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 12 ಅಕ್ಟೋಬರ್ 2018

ಜೆಡಿಎಸ್, ಕಾಂಗ್ರೆಸ್’ನಿಂದ ಯಾರನ್ನೇ ಕಣಕ್ಕಿಳಿಸಿದರೂ, ಲೋಕಸಭೆ ಉಪ ಚುನಾವಣೆಯಲ್ಲಿ ಗೆಲುವು ನಮ್ಮದೇ ಅಂತಾ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಈಗಾಗಲೇ ಜಿಲ್ಲೆಯಾದ್ಯಂತ ಪ್ರಚಾರ ಕಾರ್ಯ ಬಿರುಸಾಗಿದೆ. ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ ಮತ್ತು ಶಿವಮೊಗ್ಗ ನಗರದಲ್ಲಿ ಇವತ್ತು ಪ್ರಚಾರ ಮಾಡುತ್ತೇವೆ. ನಿನ್ನೆಯ ಪ್ರಚಾರದಲ್ಲೂ ಭಾರೀ ಬೆಂಬಲ ವ್ಯಕ್ತವಾಗಿದೆ. ಹಾಗಾಗಿ ಈ ಉಪ ಚುನಾವಣೆಯಲ್ಲಿ ರಾಘವೇಂದ್ರ ಅವರು ಗೆಲುವು ಸಾಧಿಸಲಿದ್ದಾರೆ ಅಂತಾ ಸ್ಪಷ್ಟಪಡಿಸಿದರು.

ಸಚಿವರ ರಾಜೀನಾಮೆಗೂ ನಮಗೆ ಸಂಬಂಧವಿಲ್ಲ

ಶಿಕ್ಷಣ ಸಚಿವ ಎನ್.ಮಹೇಶ್ ರಾಜೀನಾಮೆ ಕುರಿತು ಕೇಳಿದ ಪ್ರಶ್ನೆಗೆ, ಅವರ ರಾಜೀನಾಮೆಗೂ ನಮಗೂ ಸಂಬಂಧವಿಲ್ಲ ಅಂತಾ ಸ್ಪಷ್ಟಪಡಿಸಿದ ಯಡಿಯೂರಪ್ಪ, ಮಹೇಶ್ ಅವರು ಮಾಯಾವತಿ ಪಕ್ಷಕ್ಕೆ ಸೇರಿದವರು. ಅದು ಅವರ ವೈಯಕ್ತಿಕ ನಿರ್ಧಾರ ಅಂತಾ ತಿಳಿಸಿದರು.

ನಾವು ಪ್ರತಿಪಕ್ಷದಲ್ಲೇ ಕೆಲಸ ಮಾಡ್ತೀವಿ

ಇನ್ನೊಂದು ತಿಂಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ಬಿಜೆಪಿ ಮುಖಂಡರ ಹೇಳಿಕೆಯನ್ನು ತಿರಸ್ಕರಿಸಿದ ಯಡಿಯೂರಪ್ಪ, ನಾವು ಪ್ರತಿಪಕ್ಷದಲ್ಲಿದ್ದೇವೆ. ಇಲ್ಲಿದ್ದುಕೊಂಡೇ ಕೆಲಸ ಮಾಡುತ್ತೇವೆ. ಸರ್ಕಾರ ಯಾವುದಾದರೂ ಕಾರಣಕ್ಕೆ ಬಿದ್ದರೆ ಮುಂದೆ ನೋಡೋಣ ಅಂತಾ ತಿಳಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!