ಶಿವಮೊಗ್ಗದಲ್ಲಿ ಸಡಗರದ ರಂಜಾನ್, ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ

ಶಿವಮೊಗ್ಗದಲ್ಲಿ ಸಡಗರದಿಂದ ರಂಜಾನ್ ಆಚರಿಸಲಾಯಿತು. ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಜಿಲ್ಲಾಧಿಕಾರಿ ಕಚೇರಿ ಎದುರುಗಿರುವ ಈದ್ಗಾ ಮೈದಾನದಲ್ಲಿ, ಭಾರೀ ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಮರು, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮಾಜಿ ಶಾಸಕ ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡರಾದ ರಮೇಶ್, ನಾಗರಾಜ್ ಸೇರಿದಂತೆ ಹಲವರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

ನಗರದ ವಿವಿಧೆಡೆ ಮಸೀದಿಗಳು, ಮದರಸಾಗಳಲ್ಲಿ ಪ್ರಾರ್ಥನೆ ನೆರವೇರಿಸಲಾಯಿತು.

ಇನ್ನು, ಸಾಮೂಹಿಕ ಪ್ರಾರ್ಥನೆ ಹಿನ್ನೆಲೆ, ನಗರದ ವಿವಿಧೆಡೆ ತಾತ್ಕಾಲಿಕವಾಗಿ ರಸ್ತೆಗಳನ್ನು ಬಂದ್ ಮಾಡಲಾಗಿತ್ತು. ಈ ಹಿನ್ನೆಲೆ, ಬೆಳಗ್ಗೆ ಕಲ ಹೊತ್ತು, ಜನ ಟ್ರಾಫಿಕ್ ಸಮಸ್ಯೆ ಎದುರಿಸುವಂತಾಯಿತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

Leave a Reply

error: Content is protected !!