BREAKING NEWS | ಭಾರತ್ ಬಂದ್ ಹಿನ್ನೆಲೆ, ಶಿವಮೊಗ್ಗದಾದ್ಯಂತ ನಾಳೆ ಶಾಲೆ, ಕಾಲೇಜುಗಳಿಗೆ ರಜೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 09 ಸೆಪ್ಟೆಂಬರ್ 2018

ಭಾರತ್ ಬಂದ್ ಹಿನ್ನೆಲೆ, ನಾಳೆ (ಸೆಪ್ಟೆಂಬರ್ 10, 2018) ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ, ದೇಶವ್ಯಾಪಿ ಕಾಂಗ್ರೆಸ್ ಪಕ್ಷ ಬಂದ್’ಗೆ ಕರೆ ನೀಡಿದೆ. ಶಿವಮೊಗ್ಗದಲ್ಲಿಯೂ ನಾಳೆ ಬೆಳಗ್ಗೆಯಿಂದ ಬಂದ್ ಮಾಡಲಾಗುತ್ತಿದೆ. ಈಗಾಗಲೇ ಹಲವು ಸಂಘಟನೆಗಳು ಬಂದ್’ಗೆ ಬಂಬಲ ನೀಡಿವೆ. ಈ ಹಿನ್ನೆಲೆಯಲ್ಲಿ, ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗುವುದನ್ನು ತಪ್ಪಿಸುವ ಸಲುವಾಗಿ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಯಾನಂದ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 741170200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!