ಭದ್ರಾವತಿ ಜೇಡಿಕಟ್ಟೆ ಬಳಿ ಭೀಕರ ಅಪಘಾತ, ಬಸ್ ಹಿಂಬದಿ ಚಕ್ರಕ್ಕೆ ಸಿಲುಕಿ ಯುವಕ ಸಾವು, ಮತ್ತೊಬ್ಬ ಗಂಭೀರ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 01 ಅಕ್ಟೋಬರ್ 2018

ಓವರ್ ಟೇಕ್ ಸಂದರ್ಭ, ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಭದ್ರಾವತಿಯ ಜೇಡಿಕಟ್ಟೆ ಬಳಿ ಘಟನೆ ನಡೆದಿದೆ. ಬುಲೆಟ್ ಬೈಕ್’ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು, ಎಂಜಿನಿಯರಿಂಗ್ ಕಾಲೇಜೊಂದರ ಬಸ್ಸನ್ನು ಓವರ್’ಟೇಕ್ ಮಾಡುತ್ತಿದ್ದರು. ಈ ವೇಳ ನಿಯಂತ್ರಣ ತಪ್ಪಿ, ಯುವಕರು ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ. 

ಭದ್ರಾವತಿ ರಾಜಪ್ಪ ಲೇಔಟ್’ನ ಪ್ರದೀಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜನ್ನಾಪುರದ ಕಾರ್ತಿಕ್ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿ

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!