ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಸಂದರ್ಭ ಸಾವಿರ ಸಾವಿರ ಜನರಿಂದ ಸಹಿ ಸಂಗ್ರಹ, ಯಾಕೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ| 21 ಸೆಪ್ಟೆಂಬರ್ 2018

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ, ಭದ್ರಾವತಿಯ ಜೀವನಾಡಿ ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಪುನಶ್ಚೇತನದ ಆಗ್ರಹ ಕೇಳಿ ಬಂದಿದೆ. ಇದಕ್ಕಾಗಿ ಸಾವಿರ ಸಾವಿರ ಜನರಿಂದ ಸಹಿ ಸಂಗ್ರಹಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅದನ್ನು ಕಳುಹಿಸಲಾಗುತ್ತದೆ.

ರಾಮಸೇನಾ ಸಂಘಟನೆಯ ಕಾರ್ಯಕರ್ತರು ರಂಗಪ್ಪ ಸರ್ಕಲ್’ನಲ್ಲಿ ಸಹಿ ಸಂಗ್ರಹಿಸುತ್ತಿದ್ದಾರೆ. ಗಣಪತಿ ವಿಸರ್ಜನಾ ಮೆರವಣಿಗೆಗೆ ಬಂದವರು ಮತ್ತು ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಗುತ್ತಿದೆ. ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆ ಪುನಶ್ಚೇತನಗೊಳ್ಳಬೇಕು. ಭದ್ರಾವತಿಯ ಹಿರಿಮೆ ಮರಳಬೇಕು ಅನ್ನುವುದು ರಾಮಸೇನಾ ಕಾರ್ಯಕರ್ತರ ಒತ್ತಾಸೆಯಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!