ಕೆಸರು ಗದ್ದೆಯಂತಾಯ್ತು ರಸ್ತೆ, ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ ಖಂಡಿಸಿ ಗ್ರಾಮಸ್ಥರು ಮಾಡಿದ್ದೇನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ಹೊಸನಗರ

ಕೆಸರು ಗದ್ದೆಯಂತಾದ ರಸ್ತೆ.. ಮನವಿ ಕೊಟ್ಟೂ ಕೊಟ್ಟೂ ಹೈರಾಣಾದ ಗ್ರಾಮಸ್ಥರು.. ದಿಕ್ಕು ತೋಚದೆ ವಿಭಿನ್ನ ಪ್ರತಿಭಟನೆ ನಡೆಸಿದ ಊರ ಜನ.

ಹೊಸನಗರದ ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರಹಳ್ಳಿ – ಚಿಟ್ಟೆಗದ್ದೆ ರಸ್ತೆ ಕೆಸರು ಗದ್ದೆಯಂತಾಗಿದೆ. ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ನಿರ್ಮಿಸಲಾಗಿದ್ದ ರಸ್ತೆ, ಮಳೆಗಾಲದಲ್ಲಿ ಸಂಪೂರ್ಣ ಹದಗೆಟ್ಟಿದೆ. ಕಳಪೆ ಕಾಮಗಾರಿಯಿಂದಾಗಿ ರಸ್ತೆ ಈ ಸ್ಥಿತಿಗೆ ತಲುಪಿದೆ ಅಂತಾ ಸ್ಥಳೀಯರು ಆರೋಪಿಸಿದ್ದಾರೆ.

ನಡೆಯುವುದೇ ಕಷ್ಟ, ಬೈಕಲ್ಲಿ ಓಡಾಡೋಕಾಗುತ್ತಾ?

ಮಳೆಗಾಲ ಆರಂಭವಾಗುತ್ತಿದ್ದಂತೆ ಮಣ್ಣು ರಸ್ತೆ, ಕೆಸರು ಗದ್ದೆಯಾಗಿ ಬದಲಾಗಿದೆ. ಈ ರಸ್ತೆಯಲ್ಲಿ ನಡೆದಾಡುವುದೇ ಕಷ್ಟವಾಗಿದೆ. ಇನ್ನು, ಬೈಕ್’ಗಳಲ್ಲಂತೂ ಹೋಗುವುದಕ್ಕೆ ಆಗುವುದೇ ಇಲ್ಲ. ಹಾಗಾಗಿ ರಸ್ತೆ ರಿಪೇರಿಗೆ ಆಗ್ರಹಿಸಿ, ಗ್ರಾಮದ ಯುವಕರು ಇತ್ತೀಚೆಗೆ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೆಸರು ಗದ್ದೆಯಂತಾಗಿರುವ ರಸ್ತೆಯಲ್ಲಿ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಆ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್’ಲೋಡ್ ಮಾಡಿ ರಸ್ತೆ ರಿಪೇರಿ ಮಾಡುವಂತೆ, ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

Leave a Reply

error: Content is protected !!