ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಭಾರೀ ವಾಹನ ಸಂಚಾರ ಬಂದ್

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ

ತೀರ್ಥಹಳ್ಳಿ – ಕುಂದಾಪುರ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಿದೆ. ಅಲ್ಲದೇ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಆದೇಶ ಹೊರಡಿಸಿದ್ದು, ಬುಲೆಟ್ ಟ್ಯಾಂಕರ್’ಗಳು, ಪಿಪ್ ಕಾರ್ಗೋ ಕಂಟೈನರ್’ಗಳು ಮತ್ತು ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಆಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್ ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಣೆ ವಾಹನಗಳು ಹೆದ್ದಾರಿಯಲ್ಲಿ ಸಂಚರಿಸುವುದನ್ನು ನಿಷೇಧಿಸಲಾಗಿದೆ.

ಕಾರು, ಜೀಪು, ವ್ಯಾನ್, ಎಲ್’ಸಿವಿ(ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು, ರಾಜಹಂಸ ಬಸ್, ಸಾರ್ವಜನಿಕರು ಪ್ರಯಾಣಿಸುವ ಬಸ್’ಗಳ ಸಂಚಾರಕ್ಕೆ ರಸ್ತೆ ಮುಕ್ತವಾಗಿದೆ ಅಂತಾ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!