BREAKING NEWS | ಶಿವಮೊಗ್ಗ, ಸಾಗರ, ಸೊರಬದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ರೇಡ್

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಅಧಿಕಾರಿಯೊಬ್ಬರ ಮನೆ ಮೇಲೆ ರೇಡ್ ಮಾಡಿದ್ದಾರೆ. ಆದಾಯಕ್ಕೂ ಮೀರಿ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆ, ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಎಲ್ಲೆಲ್ಲಿ ದಾಳಿಯಾಗಿದೆ?

ಸೊರಬ ಪಂಚಾಯಿತಿ ರಾಜ್ ಎಂಜಿನಿಯರ್ ಯಶವಂತ್ ಎಂಬುವವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಯಶವಂತ್ ಅವರಿಗೆ ಸೇರಿದ ಶಿವಮೊಗ್ಗದ ಮತ್ತು ಸಾಗರದ ಅಣಲೇಕೊಪ್ಪದ ಮನೆ, ಚಂದ್ರಗುತ್ತಿಯಲ್ಲಿರುವ ಫಾರಂ ಹೌಸ್, ಸೊರಬ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಎಸಿಬಿ ಡಿಎಸ್’ಪಿ ಚಂದ್ರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

Leave a Reply

error: Content is protected !!