ಜೋಗದಲ್ಲಿ 13 ಅಧಿಕಾರಿಗಳ ಮನೆ ಬೀಗ ಒಡೆದ ಕಳ್ಳರು, ಏನೇನೆಲ್ಲ ಕದ್ದಿದ್ದಾರೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ಸಾಗರ | 01 ಅಕ್ಟೋಬರ್ 2018

ಜೋಗದ ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳ ಮನೆಗಳಲ್ಲಿ ಸರಣಿ ಕಳ್ಳತನವಾಗಿದೆ. 13 ಮನೆಗಳಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದಾರೆ. ಲಕ್ಷಾಂತರ ರೂಪಾಯಿ ಕಳ್ಳತನ ಮಾಡಿದ್ದಾರೆ.

ಭಾನುವಾರ ರಾತ್ರಿ ಘಟನೆ ನಡೆದಿದೆ. ಕೆಪಿಸಿ ಕಾಲೋನಿಯ ಮನೆಗಳ ಬೀಗ ಒಡೆದು, ಸುಮಾರು 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ.

ಘಟನೆಯಲ್ಲಿ 75 ಗ್ರಾಂ ಬಂಗಾರ, 2 ಕೆ.ಜಿ ಬೆಳ್ಳಿ, 2 ಲಕ್ಷ ರೂ. ನಗದು ಕಳ್ಳತನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸಾಗರ ಡಿವೈಎಸ್’ಪಿ ಮಂಜುನಾಥ್, ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್’ಪೆಕ್ಟರ್, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜೋಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!