ಇವತ್ತು ಮಧ್ಯಾಹ್ನ ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರಬಿಡುವ ಸಾಧ್ಯತೆ, ನದಿ ಪಾತ್ರದ ಜನರಿಗೆ ಎಚ್ಚರಿಕೆ

ಶಿವಮೊಗ್ಗ ಲೈವ್.ಕಾಂ | ಸಾಗರ

ಭಾರೀ ಮಳೆಯಿಂದ ಲಿಂಗನಮಕ್ಕಿ ಜಲಾಶಯದಲ್ಲಿ ಒಂದೇ ದಿನ ಮೂರು ಅಡಿಯಷ್ಟು ನೀರು ಹೆಚ್ಚಳವಾಗಿದೆ. ಹಾಗಾಗಿ, ಯಾವುದೇ ಕ್ಷಣದಲ್ಲೂ ಅಣೆಕಟ್ಟೆಯ ಗೇಟು ತೆಗೆದು ನೀರು ಹೊರಬಿಡುವ ಸಾಧ್ಯತೆ ಇದೆ.

ಲಿಂಗನಮಕ್ಕಿ ಜಲಾಶಯಕ್ಕೆ 94,861 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಹಾಗಾಗಿ ಅಣೆಕಟ್ಟೆಯಲ್ಲಿ ನೀರಿನ ಮಟ್ಟ 1815.35 ಅಡಿಗೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಹೆಚ್ಚೂ ಕಡಿಮೆ ಮೂರು ಅಡಿಯಷ್ಟು ನೀರು ಏರಿಕೆಯಾಗಿದೆ. ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲೂ ನೀರು ಹೊರಬಿಡುವ ಸಾಧ್ಯತೆ ಇದೆ. ಇವತ್ತು ಮಧ್ಯಾಹ್ನ 12 ಗಂಟೆ ವೇಳೆಗೆ ಲಿಂಗನಮಕ್ಕಿಯ ಕ್ರಸ್ಟ್ ಗೇಟುಗಳನ್ನು ತೆರೆಯುವ ಸಂಭವವಿದೆ.

ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ

ಜಲಾಶಯದಿಂದ ನೀರು ಹೊರಬಿಡುವ ಸಾಧ್ಯತೆ ಇರುವುದರಿಂದ, ನದಿಯ ಕೆಳದಂಡೆಯಲ್ಲಿ ವಾಸಿಸುವ ಜನರು, ತಮ್ಮ ಜನ, ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಕರ್ನಾಟಕ ವಿದ್ಯುತ್ ನಿಗಮ ಕೊನೆಯೆ ಎಚ್ಚರಿಕೆ ನೀಡಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

Leave a Reply

error: Content is protected !!