ಮಳೆಹಾನಿ ಪ್ರದೇಶಗಳಿಗೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ, ಎಲ್ಲೆಲ್ಲಿ ಪರಿಶೀಲನೆ ನಡೆಸಿದರು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ಸೊರಬ / ಸಾಗರ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲೆಯ ವಿವಿಧೆಡೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೆಳಗ್ಗೆ ಸೊರಬ ತಾಲೂಕಿನಿಂದ ಪರಿಶೀಲನೆ ಆರಂಭಿಸಿದ ಯಡಿಯೂರಪ್ಪ, ಮಳೆಹಾನಿ ಕುರಿತು ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.

ವರದಾ ನದಿ ಪಾತ್ರದಲ್ಲಿರುವ ಸೊರಬ ತಾಲೂಕಿನ ವಿವಿಧೆಡೆ ಪರಿಶೀಲನೆ ನಡೆಸಿದ ಯಡಿಯೂರಪ್ಪ, ಬಳಿಕ ಸಾಗರ ತಾಲೂಕಿನ ಸೈದೂರು, ಸಿರಿವಂತೆ, ಕಾನ್ಲೆ, ಬೀಸನಗದ್ದೆಯಲ್ಲಿ ಮಳೆಯಿಂದ ಆದ ಹಾನಿಯನ್ನು ವೀಕ್ಷಿಸಿದರು.

ಇನ್ನು, ಮಧ್ಯಾಹ್ನ ಸಿರಿವಂತೆಯಲ್ಲಿರುವ ದೇಗುಲಕ್ಕೆ ಭೇಟಿ ನೀಡಿದ ಯಡಿಯೂರಪ್ಪ, ದೇವರ ಆಶೀರ್ವಾದ ಪಡೆದರು. ನಂತರ ಸಾಗರದ ಬಸವನಹೊಳೆಗೆ ತೆರಳಿದ ಯಡಿಯೂರಪ್ಪ, ಪರಿಶೀಲಿಸಿದರು.

ವಿಧಾನ ಸಭೆ ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ಅವರೊಂದಿಗೆ, ಸೊರಬ ಶಾಸಕ ಕುಮಾರ್ ಬಂಗಾರಪ್ಪ, ಸಾಗರ ಶಾಸಕ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಭಾರತಿ ಶೆಟ್ಟಿ, ಮಾಜಿ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

Leave a Reply

error: Content is protected !!