ಜಿಲ್ಲಾ ಪಂಚಾಯಿತಿ ಸದಸ್ಯ ಕಾಗೋಡು ಅಣ್ಣಪ್ಪ ನಿಧನ, ನಾಳೆ ಸಾಗರದಲ್ಲಿ ಅಂತಿಮ ದರ್ಶನ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 5 ಸೆಪ್ಟೆಂಬರ್ 2018

ಅನಾರೋಗ್ಯದಿಂದ ಬಳಲುತ್ತಿದ್ದ ಸಾಗರ ತಾಲೂಕಿನ ಆವಿನಹಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಕಾಗೋಡು ಅಣ್ಣಪ್ಪ ನಿಧನರಾಗಿದ್ದಾರೆ. ಕ್ಯಾನ್ಸರ್’ನಿಂದ ಬಳಲುತ್ತಿದ್ದ ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ಮೃತರಿಗೆ ಪತ್ನಿ, ಮೂವರು ಪುತ್ರಿಯರಿದ್ದಾರೆ. ಕಾಗೋಡು ಅಣ್ಣಪ್ಪ ಅವರು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಸಹೋದರನ ಪುತ್ರ.

ಬೆಳಗ್ಗೆ ಸಾರ್ವಜನಿಕರಿಗೆ ಅಂತಿಮ ದರ್ಶನ

ಕಾಗೋಡು ಅಣ್ಣಪ್ಪ  ಅವರ ಪಾರ್ಥೀವ ಶರೀರವನ್ನು ಸೆ.6ರಂದು ಬೆಳಗ್ಗೆ 7 ಗಂಟೆಯಿಂದ 10 ಗಂಟೆವರೆಗೆ, ಕಾಗೋಡು ತಿಮ್ಮಪ್ಪ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ  ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಾಂಸ್ಕೃತಿಕ ಕ್ಷೇತ್ರದಲ್ಲೂ ಖ್ಯಾತರು

ಕಾಗೋಡು ಅಣ್ಣಪ್ಪ ಅವರು ರಾಜಕೀಯ ಕ್ಷೇತ್ರದಲ್ಲಿ ಮಾತ್ರವಲ್ಲ, ಸಾಂಸ್ಕೃತಿವಾಗಿಯೂ ಗುರುತಿಸಿಕೊಂಡಿದ್ದರು. ಯಕ್ಷಗಾನ ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿದ್ದರು. ಹಂಪಿ ಕನ್ನಡ ವಿವಿ ಸೆನೆಟ್ ಮೆಂಬರ್ ಆಗಿದ್ದರು. ಅಖಿಲ ಭಾರತ ಕರಕುಶಲ ಅಭಿವೃದ್ಧಿ ಮಂಡಳಿಯ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದರು. ಇನ್ನು, ಕಾಗೋಡು ರಂಗಮಂಚ ಸಂಸ್ಥೆಯನ್ನು 1979ರಲ್ಲಿ ಸ್ಥಾಪಿಸಿ, ರಂಗ ಕಲೆಗೆ ಪ್ರೋತ್ಸಾಹ ನೀಡಿದ್ದರು.

ಡೊಳ್ಳು ಕುಣಿತ ಕಲಾವಿದರಾಗಿದ್ದ ಕಾಗೋಡು ಅಣ್ಣಪ್ಪ ಅವರು, ಡೊಳ್ಳು ಕುಣಿತ ತಂಡಗಳನ್ನು ವಿದೇಶಕ್ಕೂ ಕರೆದೊಯ್ದಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!