ಶಿಕಾರಿಪುರದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಂದ ರೇಡ್, ದಾಖಲೆಗಳ ಪರಿಶೀಲನೆ

ಶಿವಮೊಗ್ಗ ಲೈವ್.ಕಾಂ | ಶಿಕಾರಿಪುರ

ಆದಾಯಕ್ಕಿಂತಲೂ ಹೆಚ್ಚಿಗೆ ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆ, ಅಧಿಕಾರಿಯೊಬ್ಬರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ಮಾಡಿದೆ. ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಶಿಕಾರಿಪುರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೆ ಎಫ್’ಡಿಎ ಚಿನ್ನಪ್ಪ ಎಂಬುವವರ ಮನೆ ಮೇಲೆ ರೇಡ್ ಮಾಡಲಾಗಿದೆ. ಶಿಕಾರಿಪುರ ತಾಲೂಕಿನ ಜಕ್ಕನಹಳ್ಳಿಯ ಜಯಲಕ್ಷ್ಮಿ ಫಾರಂ ಹೌಸ್ ಸೇರಿದಂತೆ ಎರಡು ಮನೆ ಮತ್ತು ಕಚೇರಿ ಮೇಲೆ ದಾಳಿಯಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ದಾವಣಗೆರೆ ವಲಯದ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!