ಅವಧಿ ಮೀರಿ ಕೂಲ್ ಡ್ರಿಂಕ್ಸ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ, 96 ಬಾಟಲಿ ತಂಪು ಪಾನಿಯ ವಶಕ್ಕೆ

ಶಿವಮೊಗ್ಗ ಲೈವ್.ಕಾಂ | ಶಿಕಾರಿಪುರ | 15 ಸೆಪ್ಟೆಂಬರ್ 2018

ಅವಧಿ ಮುಗಿದ ಕೂಲ್ ಡ್ರಿಂಕ್ಸ್ ಮಾರಾಟ ಮಾಡುತ್ತಿರುವ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವಧಿ ಮೀರಿದ ತಂಪು ಪಾನಿಯದ 96 ಬಾಟಲಿಗಳನ್ನು ವಶಕ್ಕೆ ಪಡೆದಿದ್ದಾರೆ.

ಶಿಕಾರಿಪುರ ಪಟ್ಟಣದ ವಿವಿಧ ಅಂಗಡಿಗಳಲ್ಲಿ ಅವಧಿ ಮುಗಿದಿರುವ ತಂಪು ಪಾನೀಯ ಮತ್ತು ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಪ್ರಕರಣಗಳನ್ನು ಪತ್ತೆ ಹಚ್ಚಿ, 96 ತಂಪು ಪಾನೀಯ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಅಂತಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿ ಡಾ.ಶಂಕರಪ್ಪ ಬಿ.ಎಸ್ ತಿಳಿಸಿದ್ದಾರೆ.

ಶಿಕಾರಿಪುರ ತಾಲೂಕು ಆಹಾರ ಸುರಕ್ಷತಾ ಅಧಿಕಾರಿ ಗುರುರಾಜ್ ಜೆ.ಬಿ. ಅವರ ನೇತೃತ್ವದ ಅಧಿಕಾರಿಗಳ ತಂಡ ಪಟ್ಟಣದ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಇಲ್ಲಿನ ಶ್ರೀ.ವಿಘ್ನೇಶ್ವರ ಟ್ರೇಡರ್ಸ್ ಮಳಿಗೆಯಲ್ಲಿ ಅವಧಿ ಮೀರಿದ ತಂಪು ಪಾನೀಯಗಳನ್ನು ಮಾರಾಟಕ್ಕೆ ಇಟ್ಟಿರುವುದು ಪತ್ತೆಯಾಗಿತ್ತು. ಹಾಗಾಗಿ ಮಾಲೀಕರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!