ಚುನಾವಣಾ ಕಣದಲ್ಲಿದ್ದ ಅಭ್ಯರ್ಥಿ ದಿಢೀರ್ ನಾಪತ್ತೆ, ಪಕ್ಷದ ಮುಖಂಡರಿಂದ ದೂರು ದಾಖಲು

ಶಿವಮೊಗ್ಗ ಲೈವ್.ಕಾಂ | ಸೊರಬ

ಚುನಾವಣಾ ಕಣದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದ ಅಭ್ಯರ್ಥಿಯೊಬ್ಬರು ದಿಢೀರ್ ನಾಪತ್ತೆಯಾಗಿದ್ದಾರೆ. ಪಕ್ಷದ ಪ್ರಮುಖರಿಗೂ ಅವರು ಸಿಗುತ್ತಿಲ್ಲ. ಕ್ಷೇತ್ರದ ಜನರಿಗೂ ಅವರು ನಾಟ್ ರೀಚಬಲ್ ಆಗಿದ್ದಾರೆ.

ಹೌದು. ಸೊರಬ ಕ್ಷೇತ್ರದ ಸ್ವರಾಜ್ ಇಂಡಿಯಾ ಪಾರ್ಟಿಯ ಅಭ್ಯರ್ಥಿ ನಾಪತ್ತೆಯಾಗಿದ್ದಾರೆ. ಕಳೆದ ಎರಡು ಮೂರು ದಿನದಿಂದ ಪಕ್ಷದ ಮುಖಂಡರಿಗೆ ಅಭ್ಯರ್ಥಿ ಹುಣವಳ್ಳಿ ಗಂಗಾಧರಪ್ಪ ಲಭ್ಯವಾಗಿಲ್ಲ. ಅವರು ಎಲ್ಲಿದ್ದಾರೆ, ಎಲ್ಲಿಗೆ ಹೇಗಿದ್ದಾರೆ ಅನ್ನುವುದು ಕಾರ್ಯಕರ್ತರಿಗೂ ತಿಳಿಯುತ್ತಿಲ್ಲ. ಈ ಕುರಿತು ಪಕ್ಷದ ಮುಖಂಡರು ಸೊರಬ ಠಾಣೆಗೆ ದೂರು ನೀಡಿದ್ದಾರೆ.

ಇನ್ನು, ಪ್ರಕರಣ ಸಂಬಂಧ ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಸುದ್ದಿಗೋಷ್ಠಿ ನಡೆಸಿ, ತಮ್ಮ ಅಭ್ಯರ್ಥಿಯ ಕುಟುಂಬದ ಮೇಲೆ ಒತ್ತಡ ಹೇರಿ, ಅವರನ್ನು ನಾಪತ್ತೆ ಮಾಡಲಾಗಿದೆ ಎಂದು ಆರೋಪಿಸಿದರು.

ಸಾಗರದಲ್ಲಿ ಇದಕ್ಕೆ ಪ್ರತಿಕ್ರಿಯೆ ನೀಡಿದ ಸೊರಬ ಶಾಸಕ ಮಧು ಬಂಗಾರಪ್ಪ, ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ನಾಪತ್ತೆ ಪ್ರಕರಣ ತಮ್ಮ ಗಮನಕ್ಕೆ ಬಂದಿದೆ. ಈ ಕುರಿತು ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

Leave a Reply

error: Content is protected !!