ಸೊರಬದಲ್ಲಿ ಹೊಸ KSRTC ಬಸ್ ನಿಲ್ದಾಣ ಅದ್ಧೂರಿ ಉದ್ಘಾಟನೆ, ಮೂರು ಮಾರ್ಗದ ಬಸ್’ಗಳಿಗೂ ಚಾಲನೆ

ಶಿವಮೊಗ್ಗ ಲೈವ್.ಕಾಂ | ಸೊರಬ | 01 ಅಕ್ಟೋಬರ್ 2018

ಸೊರಬ ತಾಲೂಕಿನ KSRTC ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವರಿಂದ ಚಾಲನೆ ಸಿಕ್ಕಿದೆ. ಸುಸಜ್ಜಿತ ಬಸ್ ನಿಲ್ದಾಣದಲ್ಲಿ ವಿವಿಧ ಮಳಿಗೆಗಳು, ಕಚೇರಿಗಳಿಗೂ ಸಚಿವ ಡಿ.ಸಿ.ತಮ್ಮಣ್ಣ ಚಾಲನೆ ನೀಡಿದರು. ಇದೇ ವೇಳೆ ಸೊರಬದಿಂದ ಮೂರು ಮಾರ್ಗದ ಸಾರಿಗೆ ಬಸ್ಸುಗಳಿಗೂ ಸಚಿವು ಹಸಿರು ಬಾವುಟ ತೋರಿಸಿದರು.

ಇದೇ ಸಂದರ್ಭ ಮಾತನಾಡಿದ ಸಚಿವ ಡಿ.ಸಿ.ತಮ್ಮಣ್ಣ, ಸಾರ್ವಜನಿಕ ಅನುಕೂಲಕ್ಕಾಗಿ ತಾಲೂಕು ಕೇಂದ್ರಗಳಲ್ಲಿರುವ ಬಸ್ ನಿಲ್ದಾಣದ ಮಳಿಗೆಗಳಲ್ಲಿ ಸರ್ಕಾರಿ ಕಚೇರಿಗಳನ್ನು ತೆರೆಯಲಾಗುತ್ತಿದೆ. ಇದರಿಂದ ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿರುವ ಸರ್ಕಾರಿ ಕಚೇರಿಗಳನ್ನು ಬಸ್ ನಿಲ್ದಾಣಗಳಿಗೆ ಸ್ಥಳಾಂತರ ಮಾಡಬಹುದು ಎಂದರು.

ಶಾಸಕ ಕುಮಾರ್ ಬಂಗಾರಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಸೇರಿದಂತೆ ಹಲವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. .

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ : 9964634494 | ಜಾಹೀರಾತಿಗಾಗಿ : 9972194422

Leave a Reply

error: Content is protected !!